ಶುಕ್ರವಾರ, ಮಾರ್ಚ್ 1, 2024

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ; ಪಲ್ಸ್ ಪೆÇೀಲಿಯೊ ಕಾರ್ಯಕ್ರಮ ಯಶಸ್ವಿಗೊಳಿಸಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ

ಬಳ್ಳಾರಿ,ಮಾ.01(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಾರ್ಚ್ 3 ರಂದು ಜರುಗುವ ರಾಷ್ಟ್ರೀಯ ಪಲ್ಸ್ ಪೆÇೀಲಿಯೊ ಲಸಿಕಾ ಕಾರ್ಯಕ್ರಮದಲ್ಲಿ ಹುಟ್ಟಿನಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ಲಸಿಕೆಯನ್ನು ಹಾಕಿಸುವ ಮೂಲಕ ಜಿಲ್ಲೆಯಲ್ಲಿ ನೂರರಷ್ಟು ಗುರಿ ಸಾಧಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಸೂಚಿಸಿದರು. ನಗರದ ಜಿಲ್ಲಾ ಪಂಚಾಯತ್ ನಜೀರ್‍ಸಾಬ್ ಸಭಾಂಗಣದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಪಲ್ಸ್ ಪೆÇೀಲಿಯೋ ಜಿಲ್ಲಾ ಸಮನ್ವಯ ಸಮಿತಿ ಎರಡನೇ ಸಭೆ, ಜಿಲ್ಲಾ ಆರೋಗ್ಯ ಸಂಘದ ಸಭೆ ಮತ್ತು ಇತರೆ ಕಾರ್ಯಕ್ರಮಗಳ ಅನುಷ್ಠಾನ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈಗಾಗಲೇ ನಿಗದಿಪಡಿಸಿರುವಂತೆ 1,97,103 ಮಕ್ಕಳಿಗೆ ಲಸಿಕೆಯನ್ನು ಹಾಕುವ ಯೋಜನೆ ರೂಪಿಸಿದ್ದು, ಪೂರ್ವ ಸಿದ್ಧತೆಯಂತೆ ಮೊದಲ ದಿನವೇ ಶೇ.100ರಷ್ಟು ಗುರಿಯನ್ನು ತಲುಪಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚಿಸಿದರು. ನಗರ ಮತ್ತು ಗ್ರಾಮೀಣ ಮಟ್ಟದಲ್ಲಿ ತ್ಯಾಜ್ಯ ವಿಲೇವಾರಿ ವಾಹನಗಳ ಮೂಲಕ ಮೈಕಿಂಗ್, ಗ್ರಾಮಗಳಲ್ಲಿ ಡಂಗೂರ ಹಾಕಿಸುವುದು, ಶಾಲಾ ಮಕ್ಕಳಿಂದ ಜಾಥಾ ಮೂಲಕ ಜನತೆಗೆ ಹೆಚ್ಚು ಮಾಹಿತಿಯನ್ನು ಒದಗಿಸುವ ಮೂಲಕ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ.ರಮೇಶ್‍ಬಾಬು ಅವರು ಮಾತನಾಡಿ, ಮಾ.03 ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೆÇೀಲಿಯೋ ದಿನದಂದು ಜಿಲ್ಲೆಯಾದ್ಯಂತ 968 ಬೂತ್‍ಗಳು, 887 ಮನೆ ಭೇಟಿ ತಂಡಗಳು, 51 ಟ್ರಾನ್ಸಿಟ್ ತಂಡಗಳು, 17 ಸಂಚಾರಿ ತಂಡಗಳನ್ನು ರಚಿಸಿದ್ದು, ಒಟ್ಟು 1970 ಜನ ಲಸಿಕೆ ಹಾಕುವ ತಂಡದಲ್ಲಿ ಕಾರ್ಯನಿರ್ವಹಿಸಲಿದ್ದು, 185 ಜನ ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮ ದಿನದಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಮತ್ತು ಜನಪ್ರತಿನಿಧಿಗಳನ್ನು ಆಹ್ವಾನಿಸುವ ಮೂಲಕ ಎಲ್ಲಾ ತಾಲ್ಲೂಕು, ಪಂಚಾಯತ್ ಮಟ್ಟದಲ್ಲಿ ಚಾಲನೆ ನೀಡಲು ಕ್ರಮವಹಿಸಲಾಗುವುದು ಎಂದು ಸಭೆಗೆ ತಿಳಿಸಿದರು. ಇತ್ತೀಚೆಗೆ ಕೇಂದ್ರ ಸರ್ಕಾರವು ಹಾವು ಕಡಿತವನ್ನು ನೋಟಿಫೈಡ್ ಕಾಯಿಲೆ ಎಂದು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಹಾವು ಕಡಿತದ ಮುಂಜಾಗ್ರತೆ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು. ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ಹಾಗೂ ಆಶಾ ಕಾರ್ಯಕರ್ತೆಯರ ಕುಂದುಕೊರತೆ ಬಗ್ಗೆ ಸಭೆಯಲ್ಲಿ ಚರ್ಚಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಸಂಘದ ಸಭೆ ಮೂಲಕ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಆರ್.ಅನಿಲ್‍ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಆಸ್ಪತ್ರೆಯ ಡಾ.ಗುರುನಾಥ.ಬಿ ಚವ್ಹಾಣ್, ವಿಮ್ಸ್ ತಜ್ಞರಾದ ಡಾ.ಅನಂತ ಆಚಾರ್ ಸೇರಿದಂತೆ ಪಶುಸಂಗೋಪನಾ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಸೇರಿದಂತೆ ತಾಲ್ಲೂಕು ಆರೋಗ್ಯಾಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ