ಮಂಗಳವಾರ, ಏಪ್ರಿಲ್ 30, 2024
ಮೇ 02 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮತದಾನ ಜಾಗೃತಿ ಕುರಿತು ‘ಪ್ರತಿಜ್ಞಾವಿಧಿ ಭೋದನೆ’ ಕಾರ್ಯಕ್ರಮ
ಬಳ್ಳಾರಿ,ಏ.30(ಕರ್ನಾಟಕ ವಾರ್ತೆ):
ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮತದಾನ ಜಾಗೃತಿ ಕುರಿತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಏ.02 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯಲ್ಲಿರುವ ಹೊಸ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆವರಣದಲ್ಲಿ ‘ಪ್ರತಿಜ್ಞಾವಿಧಿ ಭೋದನೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಈ ವೇಳೆ ಜಿಲ್ಲಾ ನ್ಯಾಯಾಲಯದ ವಿವಿಧ ನ್ಯಾಯಾಧೀಶರು ಭಾಗವಹಿಸುವರು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ