ಸೋಮವಾರ, ಏಪ್ರಿಲ್ 1, 2024
ಏ.03 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಏ.01(ಕರ್ನಾಟಕ ವಾರ್ತೆ):
ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110ಕೆ.ವಿ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಲಿಲೋ ನಿರ್ಮಾಣ ಕಾರ್ಯವನ್ನು ತುರ್ತಾಗಿ ಕೈಗೊಳ್ಳುತ್ತಿರುವುದರಿಂದ 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಏ.03 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನಬಾಬು ಅವರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-01 ಡಿ.ಕಗ್ಗಲ್ ಐಪಿ ಮಾರ್ಗದ ಡಿ.ಕಗ್ಗಲ್ ಗ್ರಾಮ, ಎಫ್-02 ಗುಡುದೂರು ಐಪಿ ಮಾರ್ಗದ ಗುಡುದೂರು, ಹಂದಿಹಾಳ್ ಗ್ರಾಮಗಳು, ಎಫ್-03 ಹಂದಿಹಾಳ್ ಐಪಿ ಮಾರ್ಗದ ಹಂದಿಹಾಳ್ ಚಾನಾಳ್ ಗ್ರಾಮಗಳು.
ಎಫ್-04 ಗುಡುದೂರು ಎನ್.ಜೆ.ವೈ ಮಾರ್ಗದ ಹಂದಿಹಾಳ್, ಚಾನಾಳ್, ಗುಡುದೂರು ಗ್ರಾಮಗಳು, ಎಫ್-05 ಚಾನಾಳ್ ಐಪಿ ಮಾರ್ಗದ ಚಾನಾಳ್ ಗ್ರಾಮ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ