ಸೋಮವಾರ, ಏಪ್ರಿಲ್ 1, 2024

ಏ.05 ರಂದು ಡಾ.ಬಾಬು ಜಗಜೀವನ್ ರಾಂ ಜಯಂತಿ

ಬಳ್ಳಾರಿ,ಏ.01(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತದ ಮಾಜಿ ಉಪಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರರಾದ ಡಾ.ಬಾಬು ಜಗಜೀವನ್ ರಾಂ ಅವರ 117 ನೇ ಜಯಂತಿಯನ್ನು ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏ.05 ರಂದು ಬೆಳಿಗ್ಗೆ 09 ಗಂಟೆಗೆ ನಗರದ ನಲ್ಲಚೇರುವು ಪ್ರದೇಶದ ಡಾ.ಬಾಬು ಜಗಜೀವನ್ ರಾಂ ಭವನದಲ್ಲಿನ ಡಾ.ಬಾಬು ಜಗಜೀವನ್ ರಾಂ ಅವರು ಪುತ್ಥಳಿಗೆ ಮಾಲಾರ್ಪಣೆ ಮಾಡುವ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್ ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ