ಸೋಮವಾರ, ಏಪ್ರಿಲ್ 15, 2024
ಬಳ್ಳಾರಿ: ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ
ಬಳ್ಳಾರಿ,ಏ.15(ಕರ್ನಾಟಕ ವಾರ್ತೆ):
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬಳ್ಳಾರಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿಗೆ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದÀಲ್ಲಿ ಶೇ.100 ರಷ್ಟು ಫಲಿತಾಂಶ ಲಭಿಸಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.
*ತರಗತಿ ವಿಭಾಗ:*
*ವಿಜ್ಞಾನ ವಿಭಾಗ:*
ಹಾಜರಾದ ವಿದ್ಯಾರ್ಥಿಗಳು 47, ಉತ್ತೀರ್ಣರಾದ ವಿದ್ಯಾರ್ಥಿಗಳು 47, ಅದರಲ್ಲಿ 21 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 25 ವಿದ್ಯಾರ್ಥಿಗಳು ಪ್ರಥಮ ದರ್ಜೆ ಮತ್ತು 01 ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣ.
*ವಾಣಿಜ್ಯ ವಿಭಾಗ:*
ಹಾಜರಾದ ವಿದ್ಯಾರ್ಥಿಗಳು 33, ಉತ್ತೀರ್ಣರಾದ ವಿದ್ಯಾರ್ಥಿಗಳು 33, ಅದರಲ್ಲಿ 18 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 15 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣಗೊಂಡಿದ್ದಾರೆ.
ಕಾಲೇಜಿಗೆ ಶೇ.100 ಕ್ಕೆ 100 ರಷ್ಟು ಫಲಿತಾಂಶ ಸಾಧಿಸಲು ಶ್ರಮಿಸಿದ ವಸತಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯವರಿಗೆ ಅಭಿನಂದಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ