ಸೋಮವಾರ, ಏಪ್ರಿಲ್ 15, 2024
ಏ.16 ರಂದು ಜಿಲ್ಲಾ ಮಟ್ಟದ ‘ಸ್ಪೀಕಥಾನ್’ ಸ್ಪರ್ಧೆ; ಸಾರ್ವಜನಿಕರಿಗೆ ವೀಕ್ಷಿಸಲು ಅವಕಾಶ
ಬಳ್ಳಾರಿ,ಏ.15(ಕರ್ನಾಟಕ ವಾರ್ತೆ):
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಇವರ ವತಿಯಿಂದ ಸಾರ್ವಜನಿಕರಲ್ಲಿ ನೈತಿಕ ಮತದಾನ ಕುರಿತು ಜಾಗೃತಿ ಮತ್ತು ಶೇಕಡವಾರು ಮತದಾನ ಪ್ರಮಾಣ ಹೆಚ್ಚಳ ಮಾಡಲು ಸ್ವೀಪ್ ಚಟುವಟಿಕೆ ಅಂಗವಾಗಿ ಏ.16 ರಂದು ಮಧ್ಯಾಹ್ನ 03 ಗಂಟೆಗೆ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ‘ಸ್ಪೀಕಥಾನ್’ ಸ್ಫರ್ಧೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಆಗಿರುವ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.
ಈಗಾಗಲೇ ತಾಲ್ಲೂಕು ಮಟ್ಟದಲ್ಲಿ 30 ವರ್ಷಕ್ಕಿಂತ ಕಡಿಮೆ ಮತ್ತು ಮೇಲ್ಪಟ್ಟ ವಯೋಮಿತಿಯವರಿಗೆ ಚುನಾವಣಾ ವಿಷಯ ಕುರಿತಂತೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ತಾಲ್ಲೂಕು ಮಟ್ಟದ ‘ಸ್ಪೀಕಥಾನ್’ ಸ್ಪರ್ಧೆ ನಡೆದಿದ್ದು, ತಾಲ್ಲೂಕು ಮಟ್ಟದಲ್ಲಿ ವಿಜೇತರಾದವರಿಗೆ ಏ.16 ರಂದು ಜಿಲ್ಲಾ ಮಟ್ಟದಲ್ಲಿ ನಡೆಯಲಿದೆ.
ಆಸಕ್ತ ಸಾರ್ವಜನಿಕರು ಮುಕ್ತವಾಗಿ ಆಗಮಿಸಿ ಸ್ಪರ್ಧೆಯನ್ನು ವೀಕ್ಷಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ