ಬುಧವಾರ, ಏಪ್ರಿಲ್ 17, 2024

ದ್ವಿತೀಯ ಪಿಯುಸಿ ಪರೀಕ್ಷೆ-2 ಗೆ ನೋಂದಣಿ: ಏ.18 ರ ವರೆಗೆ ಅವಧಿ ವಿಸ್ತರಣೆ

ಬಳ್ಳಾರಿ,ಏ.16(ಕರ್ನಾಟಕ ವಾರ್ತೆ): ಏ.29 ರಿಂದ ಮೇ 16 ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-2 ಕ್ಕೆ ನೋಂದಣಿ ಮಾಡಿಕೊಳ್ಳಲು ಏ.16 ರಂದು ಕೊನೆ ದಿನಾಂಕ ನಿಗದಿಪಡಿಸಲಾಗಿತ್ತು. ಇನ್ನೂ ಅಧಿಕ ವಿದ್ಯಾರ್ಥಿಗಳು ನೋಂದಣಿಯಾಗದೇ ಇರುವ ಕಾರಣ, ಏ.18 ರ ಸಂಜೆಯ ವರೆಗೆ ನೋಂದಾಯಿಸಿಕೊಳ್ಳಲು ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಟಿ.ಪಾಲಾಕ್ಷ ಅವರು ತಿಳಿಸಿದ್ದಾರೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಅನುತ್ತೀರ್ಣರಾದವರು ನೋಂದಾಯಿಸಿಕೊಳ್ಳಬಹುದಾಗಿದೆ. 2024ರ ಪರೀಕ್ಷೆ-1ರಲ್ಲಿ ಹಾಜರಾತಿ ಕೊರತೆಯಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗದೇ ಇರುವ ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆ-2ಕ್ಕೆ ನೇರವಾಗಿ ಖಾಸಗಿ ಅಭ್ಯರ್ಥಿಯಾಗಿ ಕಲಾ ಅಥವಾ ವಾಣಿಜ್ಯ ವಿಭಾಗಗಳಿಗೆ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಅವಳಿ ಜಿಲ್ಲೆಗಳ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಖುದ್ದಾಗಿ ವಿದ್ಯಾರ್ಥಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು, ಗೈರು ಹಾಜರಾದ ವಿದ್ಯಾರ್ಥಿಗಳು ಮತ್ತು ಪರೀಕ್ಷೆ-1ರಲ್ಲಿ ಗಳಿಸಿದ ಅಂಕಗಳನ್ನು ಉತ್ತಮ ಪಡಿಸಿಕೊಳ್ಳಲು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ