ಶುಕ್ರವಾರ, ಏಪ್ರಿಲ್ 19, 2024
ಏ.20 ರಂದು ಸಿರುಗುಪ್ಪ ನಗರದಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ
ಬಳ್ಳಾರಿ,ಏ.19(ಕರ್ನಾಟಕ ವಾರ್ತೆ):
ಸಿರುಗುಪ್ಪ ನಗರ ಕಾರ್ಯ ಮತ್ತು ಪಾಲನೆ ಉಪವಿಭಾಗ ಜೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಹಾಗೂ SಔP ಕುರಿತು ಜಾಗೃತಿ ಮೂಡಿಸುವ ಸಭೆಯನ್ನು ಏ.20 ರಂದು ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಸಿರುಗುಪ್ಪ ಉಪವಿಭಾಗ ಕಚೇರಿಯಲ್ಲಿ ಏರ್ಪಡಿಸಲಾಗಿದೆ ಎಂದು ಸಿರುಗುಪ್ಪ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮ ಆಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ