ಶುಕ್ರವಾರ, ಏಪ್ರಿಲ್ 19, 2024
ಏ.20 ರಂದು ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯಲ್ಲಿ ಗ್ರಾಹಕರ ಸಂವಾದ ಸಭೆ
ಬಳ್ಳಾರಿ,ಏ.19(ಕರ್ನಾಟಕ ವಾರ್ತೆ):
ಗ್ರಾಮೀಣ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಸ್ಯೆಗಳ ಇತ್ಯರ್ಥಗೊಳಿಸಲು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಏ.20ರಂದು ಬೆಳಿಗ್ಗೆ 11:00 ರಿಂದ 1:30 ವರೆಗೆ ಜೆಸ್ಕಾಂ ಗ್ರಾಮೀಣ ಉಪ-ವಿಭಾಗದ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಜೆಸ್ಕಾಂನ ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಕೆ.ಮೋಹನಬಾಬು ಅವರು ತಿಳಿಸಿದ್ದಾರೆ.
ವಿದ್ಯುತ್ ಗ್ರಾಹಕರು ವಿದ್ಯುತ್ ಸಂಬಂಧಿತ ಅವಹಾಲುಗಳಿದ್ದಲ್ಲಿ, ಗ್ರಾಹಕರ ಸಂವಾದ ಸಭೆಯಲ್ಲಿ ಪಾಲ್ಗೊಂಡು ಇತ್ಯರ್ಥಗೊಳಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ