ಗುರುವಾರ, ಏಪ್ರಿಲ್ 25, 2024

ದಾಖಲೆ ಇಲ್ಲದ ರೂ.23 ಲಕ್ಷ ನಗದು ವಶಕ್ಕೆ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಏ.25(ಕರ್ನಾಟಕ ವಾರ್ತೆ): ನಗರದ ಬ್ರೂಸ್‍ಪೇಟೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಮಲೇಶ್ ಎನ್ನುವ ವ್ಯಕ್ತಿಯ ಮನೆಯಲ್ಲಿ ಸೂಕ್ತ ದಾಖಲೆಯಿಲ್ಲದ ರೂ.23 ಲಕ್ಷದ ನಗದನ್ನು ಬುಧವಾರ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದ್ದು, ಆದಾಯ ತೆರಿಗೆ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಖಚಿತ ಮಾಹಿತಿ ಮೇರೆಗೆ ಎಫ್‍ಎಸ್‍ಟಿ ಮತ್ತು ಎಸ್‍ಎಸ್‍ಟಿ ತಂಡಗಳು ದಾಳಿ ನಡೆಸಿ, ಜಪ್ತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅದೇರೀತಿಯಾಗಿ ವಿವಿಧೆಡೆ ಅಬಕಾರಿ ಇಲಾಖೆ ಪೊಲೀಸ್ ಅಧಿಕಾರಿಗಳಿಂದ 30.06 ಲೀ. (ಅಂದಾಜು ರೂ.15,148 ಮೌಲ್ಯದ) ಮದ್ಯ ವಶಪಡಿಸಿಕೊಳ್ಳಲಾಗಿದೆ ಮತ್ತು 0.08 ಕೆ.ಜಿ (ಅಂದಾಜು ರೂ.1,400 ಮೌಲ್ಯದ) ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ