ಗುರುವಾರ, ಏಪ್ರಿಲ್ 25, 2024

ಏ.26 ರಂದು ಬಳ್ಳಾರಿಯಲ್ಲಿ ಖಾಸಗಿ ಕಾರ್ಯಕ್ರಮ ತೋರಣಗಲ್ಲು ವಿಮಾನ ನಿಲ್ದಾಣ ವ್ಯಾಪ್ತಿಯಲ್ಲಿ ವಿವಿಧೆಡೆ ಸಂಚಾರ ಸ್ಥಗಿತ

ಬಳ್ಳಾರಿ,ಏ.25(ಕರ್ನಾಟಕ ವಾರ್ತೆ): ನಗರದಲ್ಲಿ ಏ.26 ರಂದು ನಡೆಯುವ ಖಾಸಗಿ ಕಾರ್ಯಕ್ರಮ ನಿಮಿತ್ತ ರಾಷ್ಟ್ರೀಯ ಪಕ್ಷವೊಂದರ ಮುಖಂಡರಾದ ರಾಹುಲ್ ಗಾಂಧಿ ಅವರು ತೋರಣಗಲ್ಲು ವ್ಯಾಪ್ತಿಯ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ರಸ್ತೆ ಮಾರ್ಗವಾಗಿ ಬಳ್ಳಾರಿಗೆ ತೆರಳುವ ಮತ್ತು ಬಳ್ಳಾರಿಯಲ್ಲಿ ಸಭೆ ಮುಗಿಸಿಕೊಂಡು ಪುನಃ ಜಿಂದಾಲ್‍ಗೆ ಬಂದು ದೆಹಲಿಗೆ ತೆರಳುವ ಹಿನ್ನಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಗಣ್ಯ ವ್ಯಕ್ತಿಗಳ ಭದ್ರತೆ ಹಾಗೂ ಸುಗಮ ಸಂಚಾರ ವ್ಯವಸ್ತೆಯನ್ನು ಕಲ್ಪಿಸುವ ಹಿತದೃಷ್ಟಿಯಿಂದ ಕರ್ನಾಟಕ ಮೋಟರ್ ವಾಹನ ಕಾಯ್ದೆ 1988 ಕಲಂ 115 ರಡಿಯಲ್ಲಿ ಹಾಗೂ ಕರ್ನಾಟಕ ಮೋಟರ್ ವಾಹನ ನಿಯಮ 1989 ನಿಯಮ 221ಎ(5) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಏ.26 ರಂದು ಬೆಳಿಗ್ಗೆ 08 ಗಂಟೆಯಿಂದ ರಾತ್ರಿ 09 ಗಂಟೆಯವರೆಗೆ ಸಂಡೂರು ತಾಲ್ಲೂಕಿನ ಮೈನ್ಸ್‍ಗಳಿಂದ ಹಾಗೂ ಬನ್ನಿಹಟ್ಟಿ ಮತ್ತು ಜಿಂದಾಲ್ ವಿಮಾನ ನಿಲ್ದಾಣದ ಮಾರ್ಗಗಳಿಂದ ಬಳ್ಳಾರಿ ಕಡೆಗೆ ಬರುವ ಮತ್ತು ವಾಪಸ್ಸು ಹೋಗುವ ಲಾರಿಗಳ ಸಂಚಾರವನ್ನು ಸ್ಥಗಿತಗೊಳಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ