ಶುಕ್ರವಾರ, ಏಪ್ರಿಲ್ 26, 2024
ಏ.29 ರಂದು ಮತದಾನ ಜಾಗೃತಿ ಅಂಗವಾಗಿ ಬೈಕ್ ಜಾಥ
ಬಳ್ಳಾರಿ,ಏ.26(ಕರ್ನಾಟಕ ವಾರ್ತೆ):
ಲೋಕಸಭಾ ಚುನಾವಣೆ 2024ರ ಅಂಗವಾಗಿ ಬಳ್ಳಾರಿ ನಗರದಲ್ಲಿ ಕಡಿಮೆ ಮತದಾನವಾದ ಮತಗಟ್ಟೆ ಕೇಂದ್ರಗಳ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಏ.29 ರಂದು ಸಂಜೆ 04.30 ಗಂಟೆಗೆ ಬೈಕ್ ಜಾಥಾ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.
ಜಾಥಾವು ನಗರದ ಹೊಸ ಜಿಲ್ಲಾಧಿಕಾರಿಗಳ ಕಚೇರಿಯಿಂದ ಆರಂಭಗೊಂಡು ತೇರುಬೀದಿ, ಹೆಚ್.ಆರ್.ಗವಿಯಪ್ಪ ವೃತ್ತ (ಮೋತಿ ಸರ್ಕಲ್), ಕೌಲ್ ಬಜಾರ್, ಸುಧಾಕ್ರಾಸ್, ದುರುಗಮ್ಮ ದೇವಸ್ಥಾನ, ಮೋಕಾ ರಸ್ತೆ, ಎಸ್.ಎನ್.ಪೇಟೆ, ಸಂಗಮ್ ವೃತ್ತದಿಂದ ಮರಳಿ ಹೊಸ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಅಂತಿಮಗೊಳ್ಳಲಿದೆ.
ಜಾಥಾದಲ್ಲಿ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ತಪ್ಪದೇ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ