ಮಂಗಳವಾರ, ಏಪ್ರಿಲ್ 2, 2024
ಗಣಿತ ವಿಷಯ ಪರೀಕ್ಷೆ ಸುಗಮ; 372 ವಿದ್ಯಾರ್ಥಿಗಳು ಗೈರು
ಬಳ್ಳಾರಿ,ಏ.02(ಕರ್ನಾಟಕ ವಾರ್ತೆ):
ಜಿಲ್ಲೆಯಾದ್ಯಂತ ನಾಲ್ಕನೇ ದಿನದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯು ಸುಗಮವಾಗಿ ನಡೆಯಿತು. ಮಂಗಳವಾರ ನಡೆದ ಗಣಿತ ವಿಷಯ ಪರೀಕ್ಷೆಗೆ ಒಟ್ಟು 20,989 ವಿದ್ಯಾರ್ಥಿಗಳು ಹಾಜರಾಗಿದ್ದು, 372 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಗಣಿತ ವಿಷಯ ಪರೀಕ್ಷೆಗೆ ಜಿಲ್ಲೆಯಲ್ಲಿ ಹೊಸದಾಗಿ 20,678 ವಿದ್ಯಾರ್ಥಿಗಳು, 683 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ ಒಟ್ಟು 21,361 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.
ಬಳ್ಳಾರಿ ಪೂರ್ವ ವಲಯ 134, ಸಂಡೂರು 53, ಸಿರುಗುಪ್ಪ 64, ಬಳ್ಳಾರಿ ಪಶ್ಚಿಮ ವಲಯ 121 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 372 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ (ಆಡಳಿತ) ಉಮಾದೇವಿ ಅವರು ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ