ಶನಿವಾರ, ಏಪ್ರಿಲ್ 13, 2024

ಜಿಲ್ಲಾಡಳಿತದಿಂದ ದೇವರ ದಾಸಿಮಯ್ಯ ಜಯಂತಿ: ಸರಳ ಆಚರಣೆ

ಬಳ್ಳಾರಿ,ಏ.13(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸಾಂಸ್ಕøತಿಕ ಸಮುಚ್ಛಯ ಆವರಣದಲ್ಲಿ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಲೋಕಸಭಾ ಸಾರ್ವತ್ರಿಕ ಚುನಾವಣಾ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಿರುವುದರಿಂದ ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ ಗುರುರಾಜ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ಸಮಾಜದ ಮುಖಂಡರು ಹಾಗೂ ಮತ್ತೀತರರು ಉಪಸ್ಥಿತರಿದ್ದರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ