ಸೋಮವಾರ, ಏಪ್ರಿಲ್ 15, 2024
ವ್ಯಕ್ತಿ ಕಾಣೆ: ಪ್ರಕರಣ ದಾಖಲು
:
ಬಳ್ಳಾರಿ,ಏ.15(ಕರ್ನಾಟಕ ವಾರ್ತೆ)
ಕಂಪ್ಲಿ ತಾಲ್ಲೂಕಿನ ಶ್ರೀ ರಾಮರಂಗಾಪುರ ಗ್ರಾಮದ ಮಂಜುನಾಥ.ಆರ್ ಎನ್ನುವ 30 ವರ್ಷ ವ್ಯಕ್ತಿ 2023 ಮೇ 26 ರಂದು ಕಾಣೆಯಾಗಿರುವ ಕುರಿತು ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಉಪ ನಿರೀಕ್ಷಕರು ಅವರು ಮನವಿ ಮಾಡಿದ್ದಾರೆ.
ಕಾಣೆಯಾದ ಯುವಕನ ಚಹರೆ:
ಎತ್ತರ 5 ಅಡಿ 6 ಇಂಚು, ಕೋಲು ಮುಖ, ಗೋಧಿ ಮೈಬಣ್ಣ, ದೃಢ ಮೈಕಟ್ಟು ಹೊಂದಿದ್ದು, ಬೆಕ್ಕಿನ ಕಣ್ಣು, ತಲೆಯಲ್ಲಿ ಕಪ್ಪು ಕೂದಲು ಇರುತ್ತದೆ. ವ್ಯಕ್ತಿ ಕಾಣೆಯಾದ ಸಂದರ್ಭದಲ್ಲಿ ಕಪ್ಪು ಮತ್ತು ಕೆಂಪು ಬಣ್ಣದ ಚೆಕ್ಸ್‍ವುಳ್ಳ ತುಂಬು ತೋಳಿನ ಶರ್ಟ್, ಗೋಧಿ ಬಣ್ಣದ ಪ್ಯಾಂಟ್ ಧರಿಸಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತಾನಾಡುತ್ತಾನೆ.
ಈ ಮೇಲ್ಕಂಡ ಚಹರೆ ಗುರುತುಳ್ಳ ವ್ಯಕ್ತಿ ಬಗ್ಗೆ ಸುಳಿವು ಸಿಕ್ಕಲ್ಲಿ ಕುಡುತಿನಿ ಪೊಲೀಸ್ ಠಾಣೆಯ ಪಿಎಸ್‍ಐ ಮೊ.9480803078 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ