ಮಂಗಳವಾರ, ಏಪ್ರಿಲ್ 2, 2024

ಪೊಲೀಸ್ ಧ್ವಜ ದಿನಾಚರಣೆ; ಐಜಿಪಿ ಬಿ.ಎಸ್.ಲೋಕೇಶ್ ಕುಮಾರ್ ಹೇಳಿಕೆ ಪೊಲೀಸ್‍ರು ಸಮಾಜದ ಕಳಕಳಿ ಹೊಂದಲಿ

ಬಳ್ಳಾರಿ,ಏ.02(ಕರ್ನಾಟಕ ವಾರ್ತೆ): ಪೆÇಲೀಸರು ಸಮಾಜದ ಬಗ್ಗೆ ಕಳಕಳಿ ಭಾವನೆ ಹೊಂದಬೇಕು. ಸಾರ್ವಜನಿಕರ ನೆಮ್ಮದಿಗೆ ಕಾರ್ಯ ಪ್ರವೃತ್ತರಾಗಬೇಕು. ಪೆÇಲೀಸ್ ಸಿಬ್ಬಂದಿಗೆ ಶಿಸ್ತು ಮತ್ತು ಸಂಯಮ ಬಹಳ ಅವಶ್ಯಕ ಎಂದು ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್ ಅವರು ಹೇಳಿದರು. ಮಂಗಳವಾರದಂದು, ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜದ ಶಾಂತಿಯ ಬದುಕಿಗೆ ಪೆÇಲೀಸರ ಸೇವೆ ಅತ್ಯಂತ ಶ್ಲಾಘನೀಯವಾದದ್ದು. ಪ್ರತಿನಿತ್ಯವೂ ಒತ್ತಡದಿಂದ ಕೆಲಸ ನಿರ್ವಹಿಸಬೇಕಾಗಿದೆ. ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪೆÇಲೀಸರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಕರ್ತವ್ಯದ ಜೊತೆಗೆ ಕುಟುಂಬಕ್ಕೂ ಸಮಯ ನೀಡಬೇಕು. ನಿವೃತ್ತರಾದ ಮೇಲೆ ಪೂರ್ಣಪ್ರಮಾಣದಲ್ಲಿ ಕುಟುಂಬದೊಂದಿಗೆ ಬೆರೆತು ಕಾಲ ಕಳೆಯಬೇಕು ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಶಸ್ತ್ರ ಸಹಾಯಕ ನಿವೃತ್ತ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಹೆಚ್.ಎ.ಎಂ.ಚನ್ನಬಸಯ್ಯ ಅವರು ಧ್ವಜ ವಂದನೆ ಸ್ವೀಕರಿಸಿ ಮಾತನಾಡಿ, ರಾಜ್ಯ ಸರ್ಕಾರದ ಸೇವೆಗಳಲ್ಲಿ ಪೆÇಲೀಸ್ ಸೇವೆ ಅತ್ಯಂತ ಮುಖ್ಯವಾದ ಸೇವೆಯಾಗಿದೆ. ಸಮಾಜದ ದುರ್ಬಲ ವರ್ಗದವರಿಗೆ ನ್ಯಾಯ ದೊರಕಿಸಿ ಕೊಡುವ ಕಾರ್ಯದಲ್ಲಿ ಪೊಲೀಸ್ ಸೇವೆ ಕಾರ್ಯ ವಿಶಿಷ್ಟವಾದದ್ದು ಎಂದು ಹೇಳಿದರು. ಸಮಾಜದಲ್ಲಿ ಶಾಂತಿ ಕಾಪಾಡುವುದರಲ್ಲಿ ಪೆÇಲೀಸರ ಪಾತ್ರ ಬಹಳ ಮಹತ್ವದ್ದು. ಪೆÇಲೀಸರು ಇಲ್ಲದಿದ್ದರೆ ಸಮಾಜದಲ್ಲಿ ಅಶಾಂತಿ ತಲೆದೋರುತ್ತದೆ. ಯಾರನ್ನು ಕಿಳಿರಿಮೆಯಿಂದ ಕಾಣಬಾರದು, ನಿಂದಿಸಬಾರದು, ಪೆÇಲೀಸರು ಜನರೊಂದಿಗೆ ಸೌಜನ್ಯದಿಂದ ವರ್ತಿಸಿ ಗೌರವ ಕಾಪಾಡಿಕೊಳ್ಳಬೇಕು. ಸಾರ್ವಜನಿಕರಲ್ಲಿ ಭಾಂದವ್ಯದ ವಾತಾವರಣ ಮೂಡಿಸಬೇಕು ಎಂದು ತಿಳಿಸಿದರು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಂಜೀತ್ ಕುಮಾರ್ ಬಂಡಾರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕರ್ನಾಟಕ ಏಕೀಕರಣವಾದ ನಂತರ ಕರ್ನಾಟಕ ಪೆÇಲೀಸ್ ಪಡೆಯನ್ನು 1965ರ ಏಪ್ರಿಲ್ 2 ರಂದು ಕರ್ನಾಟಕ ಪೆÇಲೀಸ್ ಕಾಯ್ದೆಗೆ ಒಳಪಡಿಸಲಾಯಿತು. ಅದರ ಸ್ಮರಣೆಗಾಗಿ ಪ್ರತಿ ವರ್ಷ ಪೆÇಲೀಸ್ ಧ್ವಜ ದಿನವನ್ನಾಗಿ ರಾಜ್ಯದ ಎಲ್ಲ ಘಟಕಗಳಲ್ಲಿ ಆಚರಿಸಲಾಗುತ್ತದೆ ಎಂದು ತಿಳಿಸಿದರು. ಕಾನೂನು ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳ ಸಂರಕ್ಷಣೆ ಮಾಡಲು ಈ ದಿನವನ್ನು ಮುಡಿಪಾಗಿಡಲಾಗುತ್ತದೆ. ನಿತ್ಯ ಜೀವನದಲ್ಲಿ ಶಾಂತಿ ಸೌಹಾರ್ದತೆಯನ್ನು ನಿರಂತರವಾಗಿ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪೆÇಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತೋರಿದ ಶೌರ್ಯ, ಸಾಹಸ ಹಾಗೂ ನಿಸ್ವಾರ್ಥ ಸೇವೆಯನ್ನು ನೆನಪಿಸುವಂತಹ ದಿನವಿದು. ಪೆÇಲೀಸ್ ಧ್ವಜಗಳನ್ನು ಮಾರಾಟ ಮಾಡಿ ಸಂಗ್ರಹವಾದ ಹಣವನ್ನು ನಿವೃತ್ತ ಪೆÇಲೀಸ್ ಅಧಿಕಾರಿಗಳ ಕಲ್ಯಾಣ ನಿಧಿಗೆ ಅರ್ಪಿಸಲಾಗುವುದು ಎಂದರು. ಇದಕ್ಕೂ ಮೊದಲು, ಹೆಚ್.ಎ.ಎಂ.ಚನ್ನಬಸಯ್ಯ ಅವರು ಪೆÇಲೀಸ್ ತುಕಡಿಗಳಿಂದ ವಂದನೆ ಸ್ವೀಕರಿಸಿದರು. ನಂತರ ಪಥ ಸಂಚಲನ ನಡೆಯಿತು. ಆ ಬಳಿಕ ಧ್ವಜಗಳ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದಿದ ಪೆÇಲೀಸ್ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೆ.ಪಿ.ರವಿಕುಮಾರ್, ಎಸ್.ನವೀನ್‍ಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ವರ್ಗ ಕುಟುಂಬ ವರ್ಗದವರು ಉಪಸ್ಥಿತರಿದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ