ಶುಕ್ರವಾರ, ಏಪ್ರಿಲ್ 19, 2024

ಬಳ್ಳಾರಿ: ಕೈಗಾರಿಕಾ ಪ್ರದೇಶಗಳಲ್ಲಿ ಮತದಾನ ಜಾಗೃತಿ ಜಾಥಾ

ಬಳ್ಳಾರಿ,ಏ.19(ಕರ್ನಾಟಕ ವಾರ್ತೆ): ಜಿಲ್ಲಾಡಳಿಯ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ `ಮತದಾನ ಜಾಗೃತಿ ಜಾಥಾ' ಮೂಲಕ ನಗರದ ಹೊರವಲಯದ ಕೈಗಾರಿಕಾ ಪ್ರದೇಶಗಳಲ್ಲಿ ವಿವಿಧ ಕೈಗಾರಿಕಾ ಘಟಕಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಮತ್ತು ಸಿಬ್ಬಂದಿಗಳಿಗೆ ಮೇ 07 ರಂದು ತಪ್ಪದೇ ಮತದಾನ ಮಾಡುವಂತೆ ಅರಿವು ಮೂಡಿಸಲಾಯಿತು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಸೋಮಶೇಖರ್ ಅವರು ಮಾತನಾಡಿ, ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಮೇ 07 ರಂದು ಮತದಾನ ನಡೆಯಲಿದ್ದು, ಅಂದು ತಪ್ಪದೇ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಂತೆ ಕೋರಿದರು. ಇದೇ ಸಂದರ್ಭದಲ್ಲಿ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಮತದಾನ ಜಾಗೃತಿ ಜಾಥಾವು ಇಂಡಸ್ಟ್ರೀಯಲ್ ಏರಿಯಾದ ಮೊದಲನೇ ಸ್ಟೇಜ್ ಸೀಡ್ಸ್ ಕಾರ್ಪೋರೇಷನ್‍ನಿಂದ ಆರಂಭವಾಗಿ ಮೊದಲನೆಯ ಹಂತ, ಎರಡನೆಯ ಹಂತ ಮತ್ತು ಹಲಕುಂದಿ ಪ್ರದೇಶದ ಇಂಡಸ್ಟ್ರೀಯಲ್ ಏರಿಯಾದ ವಿವಿಧ ಕೈಗಾರಿಕೆಗಳಿಗೆ ಭೇಟಿ ನೀಡಿ ಎಪಿಎಂಸಿಯಲ್ಲಿ ಸಮಾರೋಪಗೊಂಡಿತು. ಈ ಸಂದರ್ಭದಲ್ಲಿ ಕೆಐಡಿಬಿ ಅಭಿವೃದ್ಧಿ ಅಧಿಕಾರಿ ಗೋವಿಂದ ನಾಯಕ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪದಾಧಿಕಾರಿಗಳು, ಕಾರ್ಮಿಕರು ಹಾಗೂ ಮತ್ತೀತರರು ಹಾಜರಿದ್ದರು. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ