ಶನಿವಾರ, ಏಪ್ರಿಲ್ 20, 2024

ಭೂ ಒಡೆತನ ಯೋಜನೆಯಡಿ ಜೇಷ್ಠತಾ ಪಟ್ಟಿ ಪ್ರಕಟ; ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ

ಬಳ್ಳಾರಿ,ಏ.20(ಕರ್ನಾಟಕ ವಾರ್ತೆ): ಜಿಲ್ಲೆಯ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ಬರುವ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಗಳಲ್ಲಿ ಭೂ ಒಡೆತನ ಯೋಜನೆಯಡಿ ಭೂ ಒಡೆತನದ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಜೇಷ್ಠತಾ ಪಟ್ಟಿಯನ್ನು ಅಂತರ್ಜಾಲ www.ballari.nic.in ನಲ್ಲಿ ಮತ್ತು ಜಿಲ್ಲಾ ಕಚೇರಿಯ ಸೂಚನಾ ಫಲಕದಲ್ಲಿಯೂ ಅಳವಡಿಸಲಾಗಿದೆ. ಆಕ್ಷೇಪಣೆಗಳಿರುವ ಭೂ ಮಾಲೀಕರು 07 ದಿನಗಳೊಳಗಾಗಿ ಈ ಕಚೇರಿಗೆ ಸಲ್ಲಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ