ಶುಕ್ರವಾರ, ಏಪ್ರಿಲ್ 19, 2024

ಬಳ್ಳಾರಿ (ಪ.ಪಂ) ಲೋಕಸಭೆ ಸಾರ್ವತ್ರಿಕ ಚುನಾವಣೆ ಚುನಾವಣಾ ಅಭ್ಯರ್ಥಿಗಳ ವೆಚ್ಚದ ಲೆಕ್ಕಪತ್ರಗಳ ಪರಿಶೀಲನೆಗೆ ದಿನ ಮತ್ತು ಸ್ಥಳ ನಿಗದಿ

ಬಳ್ಳಾರಿ,ಏ.19(ಕರ್ನಾಟಕ ವಾರ್ತೆ): 09-ಬಳ್ಳಾರಿ (ಪ.ಪಂ) ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿರುವ ಅಭ್ಯರ್ಥಿಗಳು ತಮ್ಮ ಚುನಾವಣಾ ವೆಚ್ಚಗಳ ಲೆಕ್ಕಪತ್ರಗಳನ್ನು ಚುನಾವಣಾ ವೆಚ್ಚ ವೀಕ್ಷಕರ ಮುಂದೆ ಪರಿಶೀಲನೆಗೆ ಮೂರು ಬಾರಿ ಹಾಜರುಪಡಿಸಲು ದಿನ ಮತ್ತು ಸ್ಥಳ ನಿಗದಿಪಡಿಸಲಾಗಿದೆ. *ನಿಗದಿಪಡಿಸಿದ ದಿನ ಮತ್ತು ಸ್ಥಳ:* ಮೊದಲನೇ ಬಾರಿಯ ಪರಿಶೀಲನೆಯು ಏ.25 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ, ಎರಡನೇ ಬಾರಿಯ ಪರಿಶೀಲನೆಯು ಏ.30 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಹಾಗೂ ಮೂರನೇ ಬಾರಿಯ ಪರಿಶೀಲನೆಯು ಮೇ 05 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಲೆಕ್ಕ ಪತ್ರಗಳ ಪರಿಶೀಲನೆ ನಡೆಸಲಾಗುವುದು. ಅಭ್ಯರ್ಥಿಗಳು ತಮ್ಮ ಚುನಾವಣಾ ವೆಚ್ಚಗಳ ಲೆಕ್ಕಪತ್ರಗಳನ್ನು ಚುನಾವಣಾ ವೆಚ್ಚ ವೀಕ್ಷಕರ ಮುಂದೆ ಪರಿಶೀಲನೆಗೆ ಮೂರು ಬಾರಿ ಹಾಜರುಪಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ