ಸೋಮವಾರ, ಏಪ್ರಿಲ್ 22, 2024

ಅನಾಮಧೇಯ ಮೃತ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಏ.22(ಕರ್ನಾಟಕ ವಾರ್ತೆ): ನಗರದ ಕೊಳಗಲ್ ರಸ್ತೆಯ ವಿಮ್ಸ್ ಆಸ್ಪತ್ರೆಯ ಕಾಂಪೌಂಡ್ ಬಳಿ ಯಾವುದೋ ಖಾಯಿಲೆಯಿಂದ ಬಳಲುತ್ತಿದ್ದ 60-70 ವರ್ಷದ ಅನಾಮಧೇಯ ವೃದ್ಧ ಏ.19 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವ ಕುರಿತು ಪ್ರಕರಣ ದಾಖಲಾಗಿದ್ದು, ಮೃತ ವಾರಸುದಾರರ ಪತ್ತೆಗೆ ಸಹಕರಿಸಬೇಕೆಂದು ಕೌಲ್‍ಬಜಾರ್ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ಮನವಿ ಮಾಡಿದ್ದಾರೆ. ಮೃತ ವೃದ್ಧನ ಚಹರೆ: ಎತ್ತರ 5 ಅಡಿ 6 ಇಂಚು, ಕೋಲು ಮುಖ, ಸಾಧಾರಣ ಕಪ್ಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಮೃತನ ಮೈಮೇಲೆ ಬೂದಿ ಬಣ್ಣದ ನೈಟ್ ಪ್ಯಾಂಟ್ ತೊಟ್ಟಿರುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತನ ವಾರಸುದಾರರ ಬಗ್ಗೆ ಸುಳಿವು ಸಿಕ್ಕಲ್ಲಿ ಕೌಲ್‍ಬಜಾರ್ ಪೊಲೀಸ್ ಠಾಣೆಯ ಮೊ.9480803047, 9480803084 ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ