ಬುಧವಾರ, ಏಪ್ರಿಲ್ 17, 2024
ಬಳ್ಳಾರಿ (ಪ.ಪಂ) ಲೋಕಸಭಾ ಸಾರ್ವತ್ರಿಕ ಚುನಾವಣೆ: ನಾಲ್ವರು ನಾಮಪತ್ರ ಸಲ್ಲಿಕೆ
ಬಳ್ಳಾರಿ,ಏ.17(ಕರ್ನಾಟಕ ವಾರ್ತೆ):
09-ಬಳ್ಳಾರಿ (ಪ.ಪಂ) ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಅಂಗವಾಗಿ ನಾಲ್ಕನೇ ದಿನವಾದ ಬುಧವಾರದಂದು ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಹಿರೇಹಾಳ್, ಪಿಜಿಪಿ (ಪ್ರಹಾರ ಜನಶಕ್ತಿ ಪಕ್ಷ) ಪಕ್ಷದಿಂದ ಮಂಜುನಾಥ್ ಗೋಸಲ್, ಬಿಎಸ್‍ಪಿ (ಬಹುಜನ ಸಮಾಜ ಪಕ್ಷ) ಕೊಳಗಲ್ ಕೃಷ್ಣಪ್ಪ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ವೈ.ಪಂಪಾಪತಿ ಸೇರಿ ಒಟ್ಟು ನಾಲ್ವರು ಬುಧವಾರ ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ಏ.12 ರಂದು ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಏ.15 ಸೋಮವಾರದಂದು ಓರ್ವ ಅಭ್ಯರ್ಥಿಯು ನಾಮಪತ್ರ ಸಲ್ಲಿಕೆ ಮಾಡಿದ್ದರು. ಏ.16 ರಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ. ಏ.17 ರಂದು ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೆ ಒಟ್ಟು 09 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.
ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆ ದಿನವಾಗಿದ್ದು, ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 22 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ