ಗುರುವಾರ, ಏಪ್ರಿಲ್ 4, 2024
ಕಂಪ್ಲಿ: ಮತದಾನ ಅರಿವಿಗೆ ಕಾಲ್ನಡಿಗೆ ಜಾಥಾ
ಬಳ್ಳಾರಿ,ಏ.04(ಕರ್ನಾಟಕ ವಾರ್ತೆ):
ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಅರ್ಹ ಮತದಾರರು ತಪ್ಪದೇ ಮತ ಚಲಾಯಿಸುವಂತೆ ಮತ್ತು ಮತದಾನ ಪ್ರಕ್ರಿಯೆಯಿಂದ ಹೊರಗುಳಿಯಬಾರದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಕಂಪ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಗುರುವಾರ ತಾಪಂ ಅಧಿಕಾರಿ, ಸಿಬ್ಬಂದಿ ವರ್ಗದವರಿದಂದ ತಾಲ್ಲೂಕು ಪಂಚಾಯತ್ ಮುಂಭಾಗದಿಂದ ಕಾಲ್ನಡಿಗೆ ಜಾಥಾ ನಡೆಯಿತು.
ಚುನಾವಣೆ ಪರ್ವ ದೇಶದ ಗರ್ವ ಎನ್ನುವ ಚುನಾವಣೆ ಅಯೋಗದ ಸಂದೇಶದಂತೆ ಪ್ರತಿಯೊಬ್ಬ ಅರ್ಹ ಸಾರ್ವಜನಿಕರು ತಮ್ಮ ಅಮೂಲ್ಯ ಮತ ಚಲಾಯಿಸಬೇಕು ಎಂದು ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕ ಮಲ್ಲನಗೌಡ ಅವರು ಹೇಳಿದರು.
ಪ್ರಜಾ ಪ್ರಭುತ್ವ ನಮ್ಮಿಂದ, ಮತದಾನ ನಮ್ಮಿಂದ ಎನ್ನುವಂತೆ ಪ್ರಜಾ ಪ್ರಭುತ್ವ ಹಬ್ಬವನ್ನು ಮತ ಚಲಾಯಿಸುವ ಮೂಲಕ ಆಚರಿಸೋಣ ಎಂದು ಕರೆ ನೀಡಿದರು.
ಈ ವೇಳೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿಲಾಯಿತು. ಸಾರ್ವಜನಿಕರಿಗೆ ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ “ನಾನು ಹೆಮ್ಮೆಯ ಮತದಾರ” ಎನ್ನುವ ಸೆಲ್ಫಿ ಬೂತ್ ತೆರೆದು, ಸಾರ್ವಜನಿಕರ ಸಹಿ ಸಂಗ್ರಹ ಅಭಿಯಾನ ನಡೆಯಿತು.
ಈ ಸಂಧರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಲಯ ನಿರೀಕ್ಷಕರಾದ ಲತಿಪಾ ಬೇಗಂ, ತಾಲ್ಲೂಕು ಪಂಚಾಯಿತಿಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಇತರರು ಭಾಗವಹಿಸಿದ್ದರು.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ