ಮಂಗಳವಾರ, ಏಪ್ರಿಲ್ 23, 2024
ವ್ಯಕ್ತಿ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ಏ.23(ಕರ್ನಾಟಕ ವಾರ್ತೆ):
ನಗರದ ತಾಳೂರು ರಸ್ತೆಯ ನಿವಾಸಿ ಬಿ.ಅರವಿಂದ ಎನ್ನುವ 29 ವರ್ಷದ ವ್ಯಕ್ತಿ ಏ.17 ರಂದು ಕಾಣೆಯಾಗಿರುವ ಕುರಿತು ಬ್ರೂಸ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ.
ಚಹರೆ ಗುರುತು:
ಎತ್ತರ 06 ಅಡಿ, ಕೋಲು ಮುಖ, ಗೋದಿ ಮೈಬ್ಬಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಹಸಿರು ಬಣ್ಣದ ಆಫ್ ಟಿ-ಶರ್ಟ್, ನೀಲಿ ಬಣ್ಣದ ಬರ್ಮೋಡಾ ಧರಿಸಿರುತ್ತಾನೆ.
ಈ ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರೂಸ್‍ಪೇಟೆ ಪೊಲೀಸ್ ಠಾಣೆ ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ:08392258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ