ಸೋಮವಾರ, ಏಪ್ರಿಲ್ 15, 2024

ಡಯಟ್: ಪ್ರಶಿಕ್ಷಣಾರ್ಥಿಗಳಿಂದ ಮತದಾನ ಜಾಗೃತಿ

ಬಳ್ಳಾರಿ,ಏ.15(ಕರ್ನಾಟಕ ವಾರ್ತೆ): ನಗರದ ರೇಡಿಯೋ ಪಾರ್ಕ್‍ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಸೋಮವಾರ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಹನುಮಕ್ಕ ಅವರ ನೇತೃತ್ವದಲ್ಲಿ ಸಂಸ್ಥೆಯ ಉಪನ್ಯಾಸಕರು, ಪ್ರಶಿಕ್ಷಣಾರ್ಥಿಗಳಿಂದ ರೇಡಿಯೋ ಪಾರ್ಕ್, ಕೌಲ್‍ಬಜಾರ್ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಮತದಾನ ಜಾಗೃತಿಯ ಫಲಕ ಹಿಡಿದು, ಮೇ 07 ರಂದು ನಡೆಯುವ ಮತದಾನ ದಿನದಂದು ತಪ್ಪದೇ ಮತದಾನ ಮಾಡುವಂತೆ ಅರಿವು ಮೂಡಿಸಲಾಯಿತು. ಈ ವೇಳೆ ಡಯಟ್‍ನ ಹಿರಿಯ ಉಪನ್ಯಾಸಕರಾದ ವಿಜಯ ರಂಗಾರೆಡ್ಡಿ, ಜೆ.ಎಂ.ತಿಪ್ಪೇಸ್ವಾಮಿ, ರಾಜಶೇಖರ್ ಸೇರಿದಂತೆ ಪ್ರಶಿಕ್ಷಣಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ