ಬುಧವಾರ, ಏಪ್ರಿಲ್ 17, 2024
ಆರೋಗ್ಯ ಇಲಾಖೆಯಿಂದ ವಿವಿಧೆಡೆ ಮತದಾನ ಜಾಗೃತಿ | ಮತದಾನ ನಮ್ಮ ಹಕ್ಕು, ತಪ್ಪದೇ ಮತ ಚಲಾಯಿಸಿ: ಡಾ.ಅಬ್ದುಲ್ಲಾ
ಬಳ್ಳಾರಿ, ಏ.16(ಕರ್ನಾಟಕ ವಾರ್ತೆ):
ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತ ಚಲಾಯಿಸಬೇಕು, ಮತದಾನ ನಮ್ಮ ಹಕ್ಕು ಎಂದು ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗಾಂಧಿನಗರ ಪ್ರಾಥಮಿಕ ಆರೋಗ್ಯ ಕೆಂದ್ರ ಆಶ್ರಯದಲ್ಲಿ ಮಂಗಳವಾರದಂದು ಬಳ್ಳಾರಿ ನಗರದ ಕರ್ನಾಟಕ ಗೃಹ ಮಂಡಳಿ ಕಾಲೋನಿ, ಸತ್ಯ ನಾರಾಯಣಪೇಟೆ, ಗಾಂಧಿನಗರದ ಮದಕೇರಿ ಭೀಮಪ್ಪ ಹಿರಿಯ ಪ್ರಾಥಮಿಕ ಶಾಲೆ ಆವರಣ, ಡಿಆರ್ ಪೆÇಲೀಸ್ ಲೈನ್, ರಾಘವೇಂದ್ರ ಮಠ ಸೇರಿದಂತೆ ವಿವಿಧೆಡೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಬ್ಬ ಅರ್ಹ ಮತದಾರರು ತಪ್ಪದೇ ಮತ ಚಲಾವಣೆ ಮಾಡಿ, ಇತರರು ಮತ ಚಲಾಯಿಸುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.
ಬಳಿಕ ಮತದಾರರ ಪ್ರತಿಜ್ಞಾ ವಿಧಿ ಭೋದಿಸಿದರು. ಇದೇ ವೇಳೆ ನಾನು ಹೆಮ್ಮೆಯ ಮತದಾರ ಎನ್ನುವ ಸೆಲ್ಪಿ ಬೂತ್ ಪಾಯಿಂಟ್‍ನಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು, ಅಧಿಕಾರಿಗಳು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.
ಜಾಗೃತಿ ಜಾಥಾದಲ್ಲಿ ಆಶಾಕಾರ್ಯಕರ್ತೆಯರು ಮತದಾನ ಕುರಿತ ವಿವಿಧ ಘೋಷಣೆಗಳ ಜಾಗೃತಿ ಫಲಕಗಳನ್ನು ಹಿಡಿದು, ಘೋಷಣೆ ಕೂಗಿದ್ದು, ವಿಶೇಷವಾಗಿತ್ತು.
ಈ ಸಂಧರ್ಭದಲ್ಲಿ ಗಾಂಧಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಕಾಶಿಪ್ರಸಾದ್, ವೈದ್ಯಾಧಿಕಾರಿ ಡಾ.ಸುಧಾರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ ಉಪ್ಪಾರ, ಬಿಪಿಎಮ್ ಮೇಘರಾಜ್, ಎಲ್‍ಡಿಸಿ ರಾಘವೇಂದ್ರ, ಆರೋಗ್ಯ ನಿರೀಕ್ಷಣಾಧಿಕಾರಿ ಸೋಮಶೇಖರ ಗೌಡ್ರು ಸಿದ್ರಾಮಪ್ಪ, ಪಿಹೆಚ್‍ಓ ಜ್ಯೋತಿಲಕ್ಷ್ಮೀ, ಚೇತನಾ, ಪದ್ಮಾವತಿ, ದುರ್ಗಾಭವಾನಿ, ನಾಗಮಣಿ, ಉಮಾ ಸೇರಿದಂತೆ ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿಧ್ಯಾರ್ಥಿಗಳು ಭಾಗವಹಿಸಿದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ