ಶನಿವಾರ, ಏಪ್ರಿಲ್ 20, 2024

ಬಳ್ಳಾರಿ: ಮಹಾನಗರ ಪಾಲಿಕೆಯಲ್ಲಿ ಕಂಟ್ರೋಲ್ ರೂಂ ಆರಂಭ

ಬಳ್ಳಾರಿ,ಏ.20(ಕರ್ನಾಟಕ ವಾರ್ತೆ): 09-ಬಳ್ಳಾರಿ (ಪ.ಪಂ) ಲೋಕಸಭಾ ಕ್ಷೇತ್ರದ 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಸಂಬಂಧ ಸಾರ್ವಜನಿಕರ ಅನುಕೂಲಕ್ಕಾಗಿ ಬಳ್ಳಾರಿ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಕಂಟ್ರೋಲ್ ರೂಂ ಆರಂಭಿಸಲಾಗಿದೆ ಎಂದು 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್‍ಸಾಬ್‍ಅವರು ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳು, ಮಾಹಿತಿ ಹಾಗೂ ಇತರೆ ಸಾರ್ವಜನಿಕ ಕುಂದುಕೊರತೆಗಳು ಇದ್ದಲ್ಲಿ ದೂರವಾಣಿ ಸಂಪರ್ಕ ಸಂಖ್ಯೆ 08932-272356, ಮತದಾರರ ಸಹಾಯವಾಣಿ-1950, ಸಿ-ವಿಜಿಲ್ ಹಾಗೂ ಎನ್.ಜಿ.ಎಸ್.ಪಿ ಪೋರ್ಟ್‍ಲ್ ಮೂಲಕ ದೂರು ಸಲ್ಲಿಸಬಹುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ