ಶನಿವಾರ, ಏಪ್ರಿಲ್ 20, 2024

ಯುವತಿ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಏ.20(ಕರ್ನಾಟಕ ವಾರ್ತೆ): ಸಿರುಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೇಶನೂರು ಗ್ರಾಮದ ಅಶ್ವಿನಿ ಎನ್ನುವ 21 ವರ್ಷದ ವಿವಾಹಿತ ಯುವತಿ ಏ.17 ರಂದು ಎಸ್.ಇ.ಎಸ್ ಬಾಲಕೀಯರ ಕಾಲೇಜ್‍ನಲ್ಲಿ ಬಿ.ಕಾಂ ಅಂತಿಮ ವರ್ಷದ ಪರೀಕ್ಷೆ ಬರೆಯಲು ಹೋದವಳು ಮರಳಿ ಮನೆಗೆ ಬಾರದೆ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಕಾಣೆಯಾದ ಯುವತಿಯ ಚಹರೆ; ಎತ್ತರ 157 ಸೆಂ.ಮೀ., ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಪ್ಪು ಕೂದಲು ಹೊಂದಿರುತ್ತಾಳೆ. ಕಾಣೆಯಾದ ಸಂದರ್ಭದಲ್ಲಿ ಲೈಟ್ ಬ್ಲೂ ಟಾಪ್, ಡಾರ್ಕ್ ಬ್ಲೂ ಪ್ಯಾಂಟ್, ನೀಲಿ ಕೋಟ್ ಇರುವ ಕಾಲೇಜ್ ಯೂನಿಫಾರಂ ಧರಿಸಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಈ ಮೇಲ್ಕಂಡ ಚಹರೆಯುಳ್ಳ ಯುವತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸಿರುಗುಪ್ಪ ಪೊಲೀಸ್ ಠಾಣೆ ದೂ.08396220333, ಎಸ್‍ಡಿಪಿಓ ದೂ.08392276000, ಡಿಪಿಓ ದೂ.08392258400 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ