ಬುಧವಾರ, ಏಪ್ರಿಲ್ 24, 2024
ವಿಎಸ್‍ಕೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ವಿವಿಧೆಡೆ ಮತದಾನ ಜಾಗೃತಿ
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
ಮತದಾರರು ಮತದಾನ ಮಾಡುವ ಮೂಲಕ ತಮ್ಮ ಜವಾಬ್ದಾರಿಯನ್ನು ಪ್ರದರ್ಶಿಸಬೇಕು ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಗಳಾದ ಪ್ರೊ.ತಿಪ್ಪೇರುದ್ರಪ್ಪ.ಜೆ ಅವರು ಹೇಳಿದರು.
ವಾಣಿಜ್ಯಶಾಸ್ತ್ರ ಅಧ್ಯಯನ ಹಾಗೂ ಪ್ರದರ್ಶನ ಕಲೆ ವಿಭಾಗದ ಸಹಯೋಗದೊಂದಿಗೆ ಮಂಗಳವಾರ ವಿಶ್ವವಿದ್ಯಾಲಯದ ಆವರಣದಲ್ಲಿ ‘ಮತದಾನ ಜಾಗೃತಿ’ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ವಿಶ್ವವಿದ್ಯಾಲಯದ ಕುಲಸಚಿವರಾದ ಎಸ್.ಎನ್.ರುದ್ರೇಶ್ ಅವರು ಮಾತನಾಡಿ, ಮತದಾನದ ಪ್ರಮಾಣ ಹೆಚ್ಚಿಸಲು ಮತದಾನ ಜಾಗೃತಿ ಅಭಿಯಾನಗಳು ಅವಶ್ಯಕ ಎಂದರು.
ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಪ್ರೊ.ಸದ್ಯೋಜಾತಪ್ಪ.ಎಸ್ ಅವರು ಮಾತನಾಡಿ, ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೇ ಮತದಾನ ಮಾಡುವಂತೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ವಿವಿಯ ವಿದ್ಯಾರ್ಥಿಗಳು ಮತದಾನದ ಪ್ರಾಮುಖ್ಯತೆ ಕುರಿತು ಜನರಲ್ಲಿ ಮತದಾನದ ಅರಿವು ಮೂಡಿಸಲು ಜಾಥಾವನ್ನು ನಗರದ ಹಲವಾರು ಪ್ರದೇಶಗಳಲ್ಲಿ ಹಮ್ಮಿಕೊಳ್ಳಲಾಗಿತ್ತು. ಚುನಾವಣೆಯ ಕುರಿತು ಗೌತಮ ನಗರದಲ್ಲಿ ಬೀದಿ ನಾಟಕ ಪ್ರದರ್ಶನ ಮಾಡಲಾಯಿತು. 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿ ಮತದಾನ ಮಾಡುವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಜೀಲಾನ್ ಬಾಷಾ, ಪ್ರೊ.ಭೀಮನಗೌಡ, ಡಾ.ಸಿದ್ದಪ್ಪ, ಡಾ.ರಾಘವೇಂದ್ರ, ಡಾ.ಜ್ಯೋತಿಲಿಂಗ, ನಾಟಕ ವಿಭಾಗದ ಅತಿಥಿ ಉಪನ್ಯಾಸಕರುಗಳಾದ ಡಾ.ಅಣ್ಣಾಜಿ ಕೃಷ್ಣಾರೆಡ್ಡಿ, ಸಹನಾ ಪಿಂಜಾರ, ಹೇಮೇಶ್ವರ.ಕೆ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ