ಬುಧವಾರ, ಏಪ್ರಿಲ್ 17, 2024

ಮಿಂಚೇರಿ ಗ್ರಾಮ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ | ಆಸೆ-ಆಮೀಷಗಳಿಗೆ ಒಳಗಾಗದೇ ಮತದಾನ ಮಾಡಿ: ಮಡಗಿನ ಬಸಪ್ಪ

ಬಳ್ಳಾರಿ,ಏ.17(ಕರ್ನಾಟಕ ವಾರ್ತೆ): ಲೋಕಸಭಾ ಸಾರ್ವತ್ರಿಕ ಚುನಾವಣೆಯು ಮೇ.07 ರಂದು ನಡೆಯಲಿದ್ದು, ಯಾವುದೇ ಆಸೆ-ಆಮೀಷಗಳಿಗೆ ಒಳಗಾಗದೇ ಪ್ರಮಾಣಿಕತೆಯಿಂದ ಮತದಾನ ಮಾಡಿ ಎಂದು ಬಳ್ಳಾರಿ ತಾಲ್ಲೂಕು ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ ಅಂಗವಾಗಿ ಸಂಜೀವರಾಯನಕೋಟೆ ಗ್ರಾಮ ಪಂಚಾಯಿತಿಯ ಮಿಂಚೇರಿ ಗ್ರಾಮದಲ್ಲಿ ನರೇಗಾದಡಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರಿಗೆ ಬುಧವಾರದಂದು ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬ ನಾಗರಿಕರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ನ್ಯಾಯ ಸಮ್ಮತವಾಗಿ ಮತ ಚಲಾಯಿಸಲು ಸೂಚಿಸಿದರು. ಇದೇ ವೇಳೆ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಕುರಿತು ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿ ಸುಮಲತಾ, ತಾಲ್ಲೂಕು ನರೇಗಾ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ