ಮಂಗಳವಾರ, ಏಪ್ರಿಲ್ 30, 2024
ಹೊಸ ಮೋಕಾದಲ್ಲಿ ಮತದಾನ ಜಾಗೃತಿ ಅಂಗವಾಗಿ ಕ್ರಿಕೆಟ್ ಓಟರ್ಸ್ ಕಪ್ ಪಂದ್ಯಾವಳಿ | ಎಲ್ಲರೂ ತಪ್ಪದೇ ಮತದಾನ ಮಾಡಿ, ತಮ್ಮ ಸುತ್ತಮುತ್ತಲಿನ ನಾಗರಿಕರಿಗೂ ಮತದಾನ ಮಾಡಲು ತಿಳಿಸಿ: ಮಡಗಿನ ಚನ್ನಬಸಪ್ಪ
ಬಳ್ಳಾರಿ,ಏ.30(ಕರ್ನಾಟಕ ವಾರ್ತೆ):
ಮೇ 07 ರಂದು ಎಲ್ಲಾ ಕ್ರೀಡಾಪಟುಗಳು ತಪ್ಪದೇ ಮತದಾನ ಮಾಡಿ ಹಾಗೂ ತಮ್ಮ ಸುತ್ತಮುತ್ತಲಿನ ಅರ್ಹ ನಾಗರಿಕರಿಗೂ ಮತದಾನ ಮಾಡುವಂತೆ ತಿಳಿಸಿ ಎಂದು ತಾಲ್ಲೂಕು ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ತಾಪಂ ಇಒ ಮಡಗಿನ ಚನ್ನಬಸಪ್ಪ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಬಳ್ಳಾರಿ ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣಾ-2024ರ ಮತದಾನ ಜಾಗೃತಿ ಮೂಡಿಸುವ ನಿಮಿತ್ತ ಹೊಸ ಮೋಕ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಹೋಬಳಿ ಮಟ್ಟದ ಪುರುಷರ ಓಟರ್ಸ್ ಕಪ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕ್ರೀಡಾಪಟುಗಳು ಆಟದಲ್ಲಿ ಉತ್ಸುಕರಾದಂತೆ ಮತ ಚಲಾವಣೆಯಲ್ಲಿ ಕೂಡ ಉತ್ಸುಕತೆಯಿಂದ ಮತದಾನ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ಮಹಮ್ಮದ್ ಗೌಸ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ