ಮಂಗಳವಾರ, ಏಪ್ರಿಲ್ 23, 2024

ಆಮಿಷಗಳಿಗೆ ಒಳಗಾಗದೆ ಸ್ವಾಭಿಮಾನದಿಂದ ಮತ ಚಲಾಯಿಸಿ

ಬಳ್ಳಾರಿ,ಏ.23(ಕರ್ನಾಟಕ ವಾರ್ತೆ): ಮೇ 07 ನಡೆಯುವ ಲೋಕಸಭಾ ಚುನಾವಣೆಗೆ ಮತದಾರರು ಆಮಿಷಗಳಿಗೆ ಒಳಗಾಗದೆ ಸ್ವಾಭಿಮಾನದಿಂದ ಮತ ಚಲಾಯಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಕೌಲ್‍ಬಜಾರ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಆಶ್ರಯದಲ್ಲಿ ರೇಡಿಯೋ ಪಾರ್ಕ್‍ನ ಐಟಿಐ ಕಾಲೇಜು ಬಳಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿಯಲ್ಲಿ ಮಾತನಾಡಿದರು. ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರ ಮತ ಅತ್ಯಮೂಲ್ಯವಾದದ್ದು, ಎಲ್ಲರು ಮತ ಚಲಾಯಿಸಿದರೆ ದೇಶದ ಅಭಿವೃದ್ಧಿಗೆ ಸಹಾಯವಾಗುತ್ತದೆ. ಜಾತಿ, ಮತ ಭೇದ ಅನ್ನದೆ ಎಲ್ಲರೂ ಮತ ಚಲಾಯಿಸಬೇಕು ಎಂದು ತಿಳಿಸಿದರು. ಜಾಗೃತಿ ಜಾಥಾವು ರೇಡಿಯೋ ಪಾರ್ಕ್‍ನ ಐಟಿಐ ಕಾಲೇಜು ಬಳಿಯಿಂದ ಆರಂಭವಾಗಿ ಸೈಂಟ್ ಜೊಸೇಫ್ ಶಾಲೆ ಪ್ರದೇಶ, ಮಟನ್ ಮಾರ್ಕೆಟ್, ಅಬ್ದುಲ್ ಸಲೀಂ ಸ್ಟ್ರೀಟ್ (ಕೌಲಬಜಾರ್ ಏರಿಯಾ), ಸೇಂಟ್ ಫಿಲೋಮಿನಾ ಶಾಲೆ ಕಂಟೋನ್ಮೆಂಟ್ ವ್ಯಾಪ್ತಿಯ ಪ್ರದೇಶಗಳಲ್ಲಿ ಸಂಚರಿಸಿತು. ಈ ವೇಳೆ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿ, ಡಾ.ಆರ್.ಅಬ್ದುಲಾ, ಆಡಳಿತ ವೈದ್ಯಾಧಿಕಾರಿ ಡಾ.ನರಸಿಂಹಮೂರ್ತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ ಉಪ್ಪಾರ, ಆರೋಗ್ಯ ನಿರೀಕ್ಷಣಾಧಿಕಾರಿ ಅರುಣ್‍ಕುಮಾರ್, ಚಂದ್ರನಾಯ್ಕ್, ಅನುಶ್ರೀ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಸುನೀತಾ, ಗಂಗಾ ಭವಾನಿ, ಹೊನ್ನೂರಬಿ, ಈಶ್ವರಮ್ಮ, ರುಕ್ಮಿಣಿ ಸೇರಿದಂತೆ ಆಶಾ ಕಾರ್ಯಕರ್ತೆಯರು, ಪೂಜಾ ನರ್ಸಿಂಗ್ ಕಾಲೇಜು ವಿಧ್ಯಾರ್ಥಿಗಳು ಹಾಗೂ ಇತರ ಸಿಬ್ಬಂದಿಯವರು ಉಪಸ್ಥಿತರಿದ್ದರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ