ಮಂಗಳವಾರ, ಏಪ್ರಿಲ್ 23, 2024

ಕರಾಮುವಿ: ಕೆಎಎಸ್, ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಬಳ್ಳಾರಿ,ಏ.23(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕರಾಮುವಿ ಕೇಂದ್ರ ಕಚೇರಿಯಲ್ಲಿ ನೀಡಲಾಗುವುದು ಎಂದು ನಿರ್ಧರಿಸಲಾಗಿದೆ ಎಂದು ಕರಾಮುವಿ ಕುಲಸಚಿವ ಪೆÇ್ರ.ಕೆ.ಬಿ.ಪ್ರವೀಣ ಅವರು ತಿಳಿಸಿದ್ದಾರೆ. ಆಸಕ್ತರು ಏ.30 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ