ಶುಕ್ರವಾರ, ಏಪ್ರಿಲ್ 12, 2024
ಮತ ಚಲಾವಣೆ-ಪ್ರತಿ ನಾಗರಿಕನ ನೈತಿಕ ಹೊಣೆ
ಬಳ್ಳಾರಿ,ಏ.12(ಕರ್ನಾಟಕ ವಾರ್ತೆ):
ಪ್ರಭುದ್ಧ ರಾಷ್ಟ್ರ ನಿರ್ಮಾಣಕ್ಕಾಗಿ ಮತ ಚಲಾಯಿಸುವುದು ಪ್ರತಿಯೊಬ್ಬ ನಾಗರಿಕನ ನೈತಿಕ ಹೊಣೆಯಾಗಿದ್ದು, ಯಾವುದೇ ಕಾರಣಕ್ಕೂ ಮತದಾನ ಪ್ರಕ್ರಿಯೆಯಿಂದ ವಂಚಿತರಾಗಬಾರದು ಎಂದು ಸಂಡೂರು ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಓ ಷಡಕ್ಷರಯ್ಯ ಅವರು ತಿಳಿಸಿದರು.
ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಸಂಡೂರು ಪಟ್ಟಣದಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆ ಸಂಖ್ಯೆ 50 ರಲ್ಲಿ ಸಂಡೂರು ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಸ್ವೀಪ್ ಸಮಿತಿ, ಪುರಸಭೆ ಹಾಗೂ ಸಿಡಿಪಿಓ ಕಚೇರಿಯ ಸಹಯೋಗದಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಮತ್ತು ಇತರರನ್ನು ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದು ಕರೆ ನೀಡಿದರು
ಈ ಸಂದರ್ಭದಲ್ಲಿ ಸಂಡೂರು ಪುರಸಭೆ ಮುಖ್ಯಾಧಿಕಾರಿ ಜಯಣ್ಣ, ಸಿಡಿಪಿಓ ಎಳೆ ನಾಗಪ್ಪ, ಸಂಡೂರು ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ದುರುಗಪ್ಪ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರು ಭಾಗವಹಿಸಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)





ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ