ಮಂಗಳವಾರ, ಏಪ್ರಿಲ್ 16, 2024
ಕುಡತಿನಿ: ಪಂಜಿನ ಮೆರವಣಿಗೆ ಮೂಲಕ ಮತದಾನ ಜಾಗೃತಿ
ಕಡ್ಡಾಯ ಮತ್ತು ನೈತಿಕ ಮತದಾನ ಕುರಿತು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಕುಡತಿನಿ ಪುರಸಭೆ ಕಾರ್ಯಾಲಯ ಇವರ ವತಿಯಿಂದ ಕುಡುತಿನಿ ಪಟ್ಟಣದಲ್ಲಿ ಸೋಮವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿ ಮತದಾನ ಜಾಗೃತಿ ಮೂಡಿಸಲಾಯಿತು.
ಹಣಕ್ಕೆ ಮತ ಮಾರಿಕೊಳ್ಳಬೇಡಿ, ಅರ್ಹರಿಗೆ ಮತ ನೀಡಿ, ಮತದಾನ ನಮ್ಮ ಹಕ್ಕು ಎನ್ನುವ ಘೋಷಣೆಗಳನ್ನು ಕೂಗಿದರು.
ಕುಡತಿನಿ ಪುರಸಭೆಯ ಮುಖ್ಯಾಧಿಕಾರಿ ಜಿ.ಸೂರ್ಯಕಾಂತ ಅವರು ಮಾತನಾಡಿ, ಮೇ 07 ರಂದು ನಡೆಯವ ಲೋಕಸಭಾ ಚುನಾವಣೆಯಲ್ಲಿ ಪಟ್ಟಣದಲ್ಲಿ ಅತಿ ಹೆಚ್ಚು ಮತದಾನ ಮಾಡಿ ಜಿಲ್ಲೆಗೆ ಮಾದರಿಯಾಗಬೇಕು ಎಂಬ ಉದ್ದೇಶದಿಂದ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಪ್ರಜ್ಞಾವಂತ ಮತದಾರರು ತಪ್ಪದೇ ಮತದಾನ ಮಾಡಿ ಎಂದು ಕರೆ ನೀಡಿದರು.
ಪುರಸಭೆ ಕಚೇರಿಯಿಂದ ಪ್ರಾರಂಭಗೊಂಡ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಈ ಸಂದರ್ಭದಲ್ಲಿ ಪುರಸಭೆ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ