ಗುರುವಾರ, ಏಪ್ರಿಲ್ 18, 2024

ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಬಳ್ಳಾರಿ,ಏ.18(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾದ್ಯಮ) ಶಾಲೆ, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿಬಿಎಸ್‍ಸಿ) ಶಾಲೆಗಳಿಗೆ 2024-25ನೆ ಸಾಲಿಗೆ 6ನೇ ತರಗತಿಗೆ ಉಚಿತ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಏ.30ರ ವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಪ್ರವೇಶ ಬಯಸುವ ಆಸಕ್ತ ವಿದ್ಯಾರ್ಥಿಗಳು ಆನ್‍ಲೈನ್‍ನ ಸೇವಾಸಿಂಧು ಪೋರ್ಟಲ್ ಲಿಂಕ್ https://sevasindhuservices.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯ ದೂ:08392200125/224 ಹಾಗೂ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಬಹುದು. ಹಾಗೂ ಸಂಕ್ಷಿಪ್ತ ವಿವರಗಳಿಗಾಗಿ http://dom.karnataka.gov.in ಲಿಂಕ್‍ಗೆ ಭೇಟಿ ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ