ಸೋಮವಾರ, ಏಪ್ರಿಲ್ 15, 2024
ವ್ಯಕ್ತಿ ಕಾಣೆ
ಬಳ್ಳಾರಿ,ಏ.15(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕು ವ್ಯಾಪ್ತಿಯ ಸುಲ್ತಾನಾಪುರ ಗ್ರಾಮದಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ ಮೂಲದ ಗಾಂಡುಕಿಸ್ಕು ಎನ್ನುವ 37 ವರ್ಷದ ವ್ಯಕ್ತಿ 2023ರ ಏ.17 ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಕುಡುತಿನಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಅವರು ಮನವಿ ಮಾಡಿದ್ದಾರೆ.
ಕಾಣೆಯಾಗಿರುವ ವ್ಯಕ್ತಿಯ ಚಹರೆ:
ಎತ್ತರ 5 ಅಡಿ 4 ಇಂಚು, ಕೋಲು ಮುಖ, ಸಾಧಾರಣ ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ವ್ಯಕ್ತಿ ಕಾಣೆಯಾದ ಸಂಧರ್ಭದಲ್ಲಿ ಬ್ಲ್ಯೂ ಕಲರ್ ಜೀನ್ಸ್ ಪ್ಯಾಂಟ್, ಬಿಳಿ ಬಣ್ಣದ ಕಪ್ಪು ಗೀರುಗಳುಳ್ಳ ಶರ್ಟ್ ಧರಿಸಿದ್ದು, ಹಿಂದಿ ಮತ್ತು ಬೆಂಗಾಲಿ ಭಾಷೆ ಮಾತಾನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕುಡುತಿನಿ ಪೊಲೀಸ್ ಠಾಣೆಯ ಪಿಎಸ್‍ಐ ಮೊ.9480803078 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ