ಭಾನುವಾರ, ಏಪ್ರಿಲ್ 21, 2024

ಜಿಲ್ಲಾಡಳಿತದಿಂದ ಭಗವಾನ್ ಮಹಾವೀರ ಜಯಂತಿ ಸಾಂಕೇತಿಕ ಆಚರಣೆ

ಬಳ್ಳಾರಿ,ಏ.21(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ನಗರದ ಅನಂತಪುರ ರಸ್ತೆಯ ಸಾಂಸ್ಕøತಿಕ ಸಮುಚ್ಚಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಸರಳ ಮತ್ತು ಸಾಂಕೇತಿಕವಾಗಿ ಆಚರಿಸಲಾಯಿತು. ಲೋಕಸಭಾ ಚುನಾವಣೆ-2024 ಪ್ರಯುಕ್ತ ನೀತಿ ಸಂಹಿತೆ ಜಾರಿಯಿರುವ ಹಿನ್ನಲೆಯಲ್ಲಿ ಭಗವಾನ್ ಮಹಾವೀರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ಮುಖಂಡರು, ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ