ಬುಧವಾರ, ಏಪ್ರಿಲ್ 3, 2024

ಕೊಳಗಲ್ಲು ಗ್ರಾಮ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ

ಬಳ್ಳಾರಿ,ಏ.03(ಕರ್ನಾಟಕ ವಾರ್ತೆ): ಲೋಕಸಭಾ ಸಾರ್ವತ್ರಿಕ ಚುನಾವಣೆಯ ದಿನದಂದು ಮತದಾರರು ಮತದಾನದಿಂದ ದೂರ ಉಳಿಯದೆ ತಪ್ಪದೇ ಮತದಾನದಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ಬಳ್ಳಾರಿ ತಾಲ್ಲೂಕು ಐಇಸಿ ಸಂಯೋಜಕ ರಮೇಶ್ ನಾಯಕ ಅವರು ನರೇಗಾ ಕೂಲಿಕಾರರಿಗೆ ತಿಳಿಸಿದರು. ಇಂದು ಬಳ್ಳಾರಿ ತಾಲ್ಲೂಕಿನ ಕೊಳಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮತದಾನ ಜಾಗೃತಿ ಅರಿವು ಮೂಡಿಸಿ ಮಾತನಾಡಿದರು. ನರೇಗಾ ಕೂಲಿಕಾರರು ಎಲ್ಲಿಯೂ ವಲಸ ಹೋಗಬಾರದು. ತಮ್ಮ ಊರುಗಳಲ್ಲಿಯೇ ನರೇಗಾ ಯೋಜನೆಯಡಿ ಕೆಲಸ ನೀಡಲಾಗುತ್ತಿದೆ. ಅದರಂತೆ ಮೇ 07 ರಂದು ಮತದಾನ ದಿನದಂದು ತಪ್ಪದೇ ಮತದಾನ ಮಾಡಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ನರೇಗಾ ಯೋಜನೆಯಡಿ ಕಾಮಗಾರಿ ಮತ್ತು ಪ್ರಸ್ತುತ ಕೂಲಿ ಮೊತ್ತದ ಕುರಿತು, ಅಳತೆಯ ತಕ್ಕಂತೆ ಕೆಲಸ ಮಾಡುವ ಕುರಿತು ಮಾಹಿತಿ ನೀಡಿದರು. ಈ ವೇಳೆ ತಾಲೂಕು ಎಂಐಎಸ್ ಸಂಯೋಜಕ ಶೇಖರ ರೆಡ್ಡಿ ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಳು, ನರೇಗಾ ಕೂಲಿಕಾರರು ಹಾಜರಿದ್ದರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ