ಮಂಗಳವಾರ, ಏಪ್ರಿಲ್ 2, 2024

ಕುರೇಕುಪ್ಪೆ ಪುರಸಭೆ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ

ಬಳ್ಳಾರಿ,ಏ.02(ಕರ್ನಾಟಕ ವಾರ್ತೆ): ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮತ ಚಲಾಯಿಸಲು ಅರಿವು ಮೂಡಿಸುವ ಕುರಿತು ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಅಧಿಕಾರಿಗಳು ಮತ್ತು ಮಹಿಳೆಯರಿಂದ ಮತದಾನ ಜಾಗೃತಿ ಮೂಡಿಸಲಾಯಿತು. ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಇವರ ನಿರ್ದೇಶನದಂತೆ ಕುರೇಕುಪ್ಪ ಪಟ್ಟಣದಲ್ಲಿ ಮತದಾನ ಜಾಗೃತಿ ಹಮ್ಮಿಕೊಳ್ಳಲಾಯಿತು. ನಮ್ಮ ಮತ-ನಮ್ಮ ಹಕ್ಕು, ನಮ್ಮ ಮತ ಮತ ಮಾರಾಟಕ್ಕಿಲ್ಲ, ನಮ್ಮ ಮತ ದೇಶಕ್ಕೆ ಹಿತ ಎಂಬ ಘೋಷಣೆಗಳನ್ನು ಕೂಗುತ್ತಾ, ಪಟ್ಟಣದ ವಿವಿಧ ವಾರ್ಡ್‍ಗಳಲ್ಲಿ ಸಂಚರಿಸಿ ನಾಗರಿಕರಿಗೆ, ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಜಾಗೃತಿ ಜಾಥಾದಲ್ಲಿ ಮೇ 07 ರಂದು ನಡೆಯುವ ಮತದಾನ ದಿನದಂದು ತಪ್ಪದೇ ಮತ ಚಲಾವಣೆ ಮಾಡಲು ಜನ ಸಾಮಾನ್ಯರಿಗೆ ಮನದಟ್ಟಣೆ ಮಾಡಲಾಯಿತು. ಮತದಾನವು ಜವಾಬ್ದಾರಿತ ನಾಗರಿಕರ ಕರ್ತವ್ಯವಾಗಿದ್ದು, ಹಣ, ವಸ್ತು, ಇನ್ನಿತರೆ ಆಮೀಷಕ್ಕೆ ಒಳಗಾಗದೆ ಮತ ಚಲಾಯಿಸಿ ಎನ್ನುವ ಭಿತ್ತಿ ಪತ್ರಗಳ ಮೂಲಕ ಮತದಾನದ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ…ಕುರೇಕುಪ್ಪ ಪುರಸಭೆಯ ಅಧಿಕಾರಿಗಳು, ಪೌರಕಾರ್ಮಿಕರು ಹಾಗೂ ಇನ್ನೀತರರು ಭಾಗವಹಿಸಿದ್ದರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ