ಗುರುವಾರ, ಏಪ್ರಿಲ್ 18, 2024

ಮಕ್ಕಳನ್ನು ಚುನಾವಣಾ ಕಾರ್ಯ, ಪ್ರಚಾರ ಕಾರ್ಯಗಳಲ್ಲಿ ಬಳಸಿಕೊಳ್ಳದಂತೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

ಬಳ್ಳಾರಿ,ಏ.18(ಕರ್ನಾಟಕ ವಾರ್ತೆ): ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಕಾರ್ಯ ಮತ್ತು ಪ್ರಚಾರ ಕಾರ್ಯಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಭಾರತ ಸರ್ಕಾರ ಮತ್ತು ವಿಶ್ವಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಸಂಬಂಧಿಸಿದಂತೆ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದು, ಒಂದು ವೇಳೆ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ