ಮಂಗಳವಾರ, ಏಪ್ರಿಲ್ 30, 2024
ಪ್ರತಿಯೊಬ್ಬರೂ ಮತ ಚಲಾಯಿಸಿ, ಸದೃಢ ದೇಶ ನಿರ್ಮಾಣಕ್ಕೆ ಕೈಜೋಡಿಸಿ: ಡಿಹೆಚ್‍ಒ ಡಾ.ರಮೇಶ್ ಬಾಬು
ಬಳ್ಳಾರಿ,ಏ.30(ಕರ್ನಾಟಕ ವಾರ್ತೆ):
ಲೋಕಸಭಾ ಚುನಾವಣೆಗೆ ಎಲ್ಲಾ ನಾಗರಿಕರು ಮೇ 07 ರಂದು ತಪ್ಪದೇ ಮತ ಚಲಾಯಿಸುವ ಮೂಲಕ ಸದೃಢ ದೇಶ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ, ಬಂಡಿಹಟ್ಟಿಯ ನಗರ ಆರೋಗ್ಯ ಕೇಂದ್ರ ಇವರ ಆಶ್ರಯದಲ್ಲಿ ನಗರದ ಬಂಡಿಹಟ್ಟಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಳಿ ಮಂಗಳವಾರ ಹಮ್ಮಿಕೊಂಡಿದ್ದ “ಮತದಾನ ಜಾಗೃತಿ” ಅಭಿಯಾನ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮತದಾನದಲ್ಲಿ ಭಾಗವಹಿಸುವುದು ಎಲ್ಲ ಮತದಾರರ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಅರ್ಹ ಮತದಾರರು ಆಸೆ-ಆಮೀಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತ ಚಲಾವಣೆ ಮಾಡಿ ಸುಭದ್ರ ಸರ್ಕಾರ ನಿರ್ಮಿಸುವಲ್ಲಿ ಪ್ರಮುಖ ಪಾತ್ರವಹಿಸಿ ಎಂದು ತಿಳಿಸಿದರು.
ಜಾಗೃತಿ ಜಾಥಾವು ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಸ್ಥಳಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಮತದಾನ ಕುರಿತು ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಆಡಳಿತ ವೈದ್ಯಾಧಿಕಾರಿ ಡಾ.ಯಾಸ್ಮೀನ್, ಡಾ.ಕಾಶಿಪ್ರಸಾದ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ ಉಪ್ಪಾರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮುಸ್ತಾಕ್ ಅಹಮ್ಮದ್, ಔಷಧಿ ಅಧಿಕಾರಿ ಖರ್ಮನ್ನಿಸಾ ಬೇಗಂ, ಆರೋಗ್ಯ ನಿರೀಕ್ಷಣಾಧಿಕಾರಿ ಮಹಾಲಿಂಗ, ವಿಜಯಲಕ್ಷ್ಮಿ, ಎಲ್‍ಡಿಸಿ ಪಾರ್ವತಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ದಾನಕುಮಾರಿ, ಶಾರದಾ, ರಾಧಿಕಾ, ಮಮತಾಜ್, ಸುನೀತಾ, ನಾಗರತ್ನ, ಯೋಗಾನಂದ, ಗವಿಸಿದ್ದಪ್ಪ ಸೇರಿದಂತೆ ಆಶಾ ಕಾರ್ಯಕರ್ತೆಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)





ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ