ಗುರುವಾರ, ಏಪ್ರಿಲ್ 18, 2024

ಮೌಲಾನಾ ಆಜಾದ್ ಮಾದರಿ ಶಾಲೆಗೆ ಪ್ರವೇಶ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬಳ್ಳಾರಿ,ಏ.18(ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ (ಆಂಗ್ಲ ಮಾಧ್ಯಮ) ಶಾಲೆಗೆ 2024-25ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಆಸಕ್ತಿಯುಳ್ಳ ವಿದ್ಯಾರ್ಥಿಗಳು, ಪೋಷಕರು ಹತ್ತಿರದ ಮೌಲಾನಾ ಆಜಾದ್ ಮಾದರಿ ಶಾಲೆ, ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ, ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿಗಳ ಕಚೇರಿಗೆ ಸಂಪರ್ಕಿಸಿ ಅರ್ಜಿ ಪಡೆದುಕೊಳ್ಳಬಹುದು. *ಅಲ್ಪಸಂಖ್ಯಾತರ ತಾಲ್ಲೂಕು ಕೇಂದ್ರಗಳ ಸಂಪರ್ಕವಾಣಿ* ಬಳ್ಳಾರಿ-8310321101, ಸಂಡೂರು-9036925966, 8660575061 ಮತ್ತು ಸಿರುಗುಪ್ಪ-9148889975. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392200125/224, ಮೊ.8861623814 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ