ಶನಿವಾರ, ಮೇ 4, 2024
ಮೇ 10 ರಂದು ಬಸವ ಜಯಂತಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
ಬಳ್ಳಾರಿ,ಮೇ 04(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬಸವ ಜಯಂತಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮೇ 10 ರಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಅವರು ತಿಳಿಸಿದ್ದಾರೆ.
ಮೇ 10 ರಂದು ಬಸವೇಶ್ವರ ಜಯಂತಿ ಅಂಗವಾಗಿ ಬೆಳಿಗ್ಗೆ 09 ಗಂಟೆಗೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತ(ಮೋತಿ ವೃತ್ತ)ದ ಬಳಿಯಿರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು.
ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯ ಅಂಗವಾಗಿ ಮೇ 10 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಾಂಸ್ಕøತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಪುಷ್ಪಾರ್ಚನೆ ಮಾಡುವುದರ ಮೂಲಕ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ