ಸೋಮವಾರ, ಮೇ 13, 2024

ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ಮೇ 14 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ) ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ಎಫ್-73 ಫೀಡರ್ ನಿರ್ವಹಣೆ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುರಿಂದ ಮೇ 14 ರಂದು ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಫ್-73 ಫೀಡರ್‍ನ ಬಸವನಕುಂಟೆ, ಕೋಟೆ ಪ್ರದೇಶ, 1 ನೇ ಗೇಟ್, 2 ನೇ ಗೇಟ್, ಸಿದ್ದಾರ್ಥ ನಗರ, ಸುಧಾ ಕ್ರಾಸ್, ಓ.ಪಿ.ಡಿ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ