ಬುಧವಾರ, ಮೇ 15, 2024

ಮೇ 16 ರಂದು ರಾಷ್ಟ್ರೀಯ ಡೆಂಗಿ ದಿನಾಚರಣೆ; ಬೈಕ್ ರ್ಯಾಲಿ

ಬಳ್ಳಾರಿ,ಮೇ 15(ಕರ್ನಾಟಕ ವಾರ್ತೆ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ‘ರಾಷ್ಟ್ರೀಯ ಡೆಂಗಿ ದಿನಾಚರಣೆ’ ಅಂಗವಾಗಿ ‘ಸಮುದಾಯದೊಂದಿಗೆ ಸೇರಿ ಡೆಂಗಿ ಜ್ವರವನ್ನು ನಿಯಂತ್ರಿಸೋಣ’ ಎಂಬ ಘೋಷವಾಕ್ಯದೊಂದಿಗೆ ಸಮುದಾಯದಲ್ಲಿ ಡೆಂಗಿ ಜ್ವರದ ಬಗ್ಗೆ ಅರಿವು ಮೂಡಿಸಲು ಮೇ 16 ರಂದು ಬೆಳಿಗ್ಗೆ 09.30 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಿಂದ ಬೈಕ್‍ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ