ಶುಕ್ರವಾರ, ಮೇ 17, 2024
ಕುಡುತಿನಿ: ಮೇ 18 ರಂದು ಶ್ರೀ ಆಂಜಿನೇಯ ಸ್ವಾಮಿ ದೇವಸ್ಥಾನ ರಥೋತ್ಸವ
ಬಳ್ಳಾರಿ,ಮೇ 17(ಕರ್ನಾಟಕ ವಾರ್ತೆ):
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವ್ಯಾಪ್ತಿಯ ಕುಡುತಿನಿ ಪಟ್ಟಣದ ಶ್ರೀ ಆಂಜಿನೇಯ ಸ್ವಾಮಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಮೇ 18 ರಂದು ನಡೆಯಲಿದೆ.
ಅಂದು ಬೆಳಿಗ್ಗೆ 07 ಗಂಟೆಗೆ ಮಡಿತೇರು ಮತ್ತು ಸಂಜೆ 05.30 ಗಂಟೆಗೆ ರಥೋತ್ಸವ ಜರುಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ