ಶುಕ್ರವಾರ, ಮೇ 17, 2024
ಸಿರುಗುಪ್ಪ: ಮೇ 18 ರಂದು ವಿದ್ಯುತ್ ಗ್ರಾಹಕರ ಕೊರತೆ ಸಭೆ
ಬಳ್ಳಾರಿ,ಮೇ 17(ಕರ್ನಾಟಕ ವಾರ್ತೆ):
ಸಿರುಗುಪ್ಪ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್‍ಗೆ ಸಂಬಂಧಿಸಿದಂತೆ ಕುಂದುಕೊರತೆ ನಿವಾರಿಸಲು ಮೇ 18 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಿರುಗುಪ್ಪ ಉಪವಿಭಾಗ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ ಏರ್ಪಡಿಸಲಾಗಿದೆ.
ವಿದ್ಯುತ್‍ಗೆ ಸಂಬಂಧಿಸಿದಂತೆ ಸಮಸ್ಯೆ ಇರುವ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಸಿರುಗುಪ್ಪ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ