ಶನಿವಾರ, ಮೇ 4, 2024

ಮೇ 19 ರಂದು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ದಾಖಲಾತಿಗೆ ಪ್ರವೇಶ ಪರೀಕ್ಷೆ

ಬಳ್ಳಾರಿ,ಮೇ 04(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾದ್ಯಮ) ಶಾಲೆ, ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿ.ಬಿ.ಎಸ್.ಇ) ಶಾಲೆಗಳ ಪ್ರಸ್ತಕ ವರ್ಷಕ್ಕೆ 6 ನೇ ತರಗತಿ ದಾಖಲಾತಿಗೆ ಮೇ 19 ರಂದು ಪ್ರವೇಶ ಪರೀಕ್ಷೆ ನಡೆಯಲಿವೆ ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಆಜಾದ ಭವನದ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಚೇರಿ ಅಥವಾ ದೂ:08392200125/224, ಸಹಾಯವಾಣಿ ಕೇಂದ್ರ (24/7) ಮೊ: 8277799990 ಗೆ ಅಥವಾ ಕೊಳಗಲ್ಲಿನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯ (ಸಿ.ಬಿ.ಎಸ್.ಸಿ) ಪ್ರಾಂಶುಪಾಲರ ಮೊ:7353346069, ಸಂಡೂರಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ: 9480933730, ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ: 9113280239 ಇವರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ