ಬುಧವಾರ, ಮೇ 22, 2024

ಮೇ 26 ರಂದು ಜೆಇಇ ಪರೀಕ್ಷೆ | ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಮಿಶ್ರಾ ಆದೇಶ

ಬಳ್ಳಾರಿ,ಮೇ 22(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮೇ 26 ರಂದು ನಗರದ 02 ಕೇಂದ್ರಗಳಲ್ಲಿ ಜೆಇಇ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ಒಳಗಿನ ಆವರಣವನ್ನು ಸಿಆರ್‍ಪಿಸಿ ಕಲಂ 144ರ ಮೇರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ನಗರದ ಬಿಐಟಿಎಂ ಕಾಲೇಜು ಮತ್ತು ಕಿಷ್ಕಿಂದ ವಿಶ್ವವಿದ್ಯಾಲಯ ಕೇಂದ್ರಗಳಲ್ಲಿ ಜೆಇಇ ಪರೀಕ್ಷೆಗಳು ಬೆಳಿಗ್ಗೆ 09 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 02.30 ರಿಂದ ಸಂಜೆ 05.30 ರವರೆಗೆ ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಒಳಗಿನ ಆವರಣವನ್ನು ನಿಬರ್ಂಧಿತ ಪ್ರದೇಶವೆಂದು ಘೋಷಿಸಿದ್ದಾರೆ. ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿμÉೀಧಿಸಿದೆ ಹಾಗೂ ಬೆಳಿಗ್ಗೆ 08 ರಿಂದ ಸಂಜೆ 06 ರ ವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶದಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ