ಸೋಮವಾರ, ಮೇ 13, 2024

ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ): ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ 6ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸತೀಶ್ ಕೆ.ಹೆಚ್ ಅವರು ತಿಳಿಸಿದ್ದಾರೆ. ಆಸಕ್ತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಆಯಾ ತಾಲ್ಲೂಕಿನ ಸಹಾಯ ನಿರ್ದೇಶಕರ ಕಚೇರಿಗಳಿಂದ ಅರ್ಜಿ ಪಡೆದು ಭರ್ತಿ ಮಾಡಿ ಮೇ 21 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಮೇ 28 ರಂದು ಡಯಟ್ ಮೂಲಕ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ